ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ, ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವತಿಯಿಂದ ಮಾನವ ಹಕ್ಕು ದಿನಾಚರಣೆಯ ಪ್ರಯುಕ್ತ ಇಂದು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಮಂಗಳೂರು ವಿವಿಯ ಇತಿಹಾಸ ವಿಭಾಗದ ಸಹ ಪ್ರಾಧ್ಯಾಪಕಿ ಡಾ. ತ್ರಿವೇಣಿ ಅರಸ್ ಸಂಪನ್ಮೂಲ ವ್ಯೆಕ್ತಿಯಾಗಿ ಮಾತನಾಡಿದರು.
ವಿಭಾಗದ ಅಧ್ಯಕ್ಷರು ಪ್ರೊ. ಪೌಲ್ ಜಿ ಅಕ್ವಿನಸ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾಜಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಯಶಸ್ವಿನಿ ಬಟ್ಟಂಗಾಯ, ಬೋಧಕ ಬೋಧಕೇತರರು, ಸಂಶೋಧನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಧೀರಜ್ ಸ್ವಾಗತಿಸಿ, ಮಣಿಕಂಠ ವಂದಿಸಿದರು. ಮಂಜುನಾಥ ಕಾರ್ಯಕ್ರಮ ನಿರೂಪಿಸಿದರು.