ಶ್ರೀ ಕೃಷ್ಣಮಠದಲ್ಲಿ ಉಡುಪಿಯ ಅಷ್ಟ ಮಠಾಧೀಶರಿಂದ ಸುಮಾರು ಇಪ್ಪತ್ತು ಲಕ್ಷ ರೂಪಾಯಿ ವೆಚ್ಚದ “ಶ್ರೀಕೃಷ್ಣ ಮುಖ್ಯಪ್ರಾಣ ಪ್ರಾಣರಕ್ಷಾ” ಆಂಬುಲೆನ್ಸ್ ನ್ನು ಅಷ್ಟಮಠಾಧೀಶರು ಜಿಲ್ಲಾಧಿಕಾರಿಗಳಾದ ಜಿ. ಜಗದೀಶ್ ರವರ ಮೂಲಕ ಜಿಲ್ಲಾಡಳಿತಕ್ಕೆ ಹಸ್ತಾಂತರಿಸಿದರು.


ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು, ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು, ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠಾಧೀಶರಾದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಶ್ರೀಪಾದರಾದ ಶ್ರೀ ವಿದ್ಯಾರಾಜೇಶ್ವರತೀರ್ಥ ಶ್ರೀಪಾದರು, ಶಿರೂರು ಮಠಾಧೀಶರಾದ ಶ್ರೀ ವೇದವರ್ಧನತೀರ್ಥ ಶ್ರೀಪಾದರು, ಶಾಸಕ ಕೆ. ರಘುಪತಿ ಭಟ್, ಜಿಲ್ಲಾ ವೈದ್ಯಾಧಿಕಾರಿಗಳು ಮತ್ತು ಮಠದ ವ್ಯವಸ್ಥಾಪಕರಾದ ಗೋವಿಂದರಾಜ್ ಮೊದಲಾದವರು ಉಪಸ್ಥಿತರಿದ್ದರು.