Monday, September 23, 2024
Monday, September 23, 2024

ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ: ಜಿಲ್ಲಾಧಿಕಾರಿ

ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆ: ಜಿಲ್ಲಾಧಿಕಾರಿ

Date:

ಜಿಲ್ಲೆಯಲ್ಲಿ ಸಂಪೂರ್ಣ ಕೋವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಜುಲೈ 19 ಮತ್ತು 22 ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲಾ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಲು ಕೈಗೊಂಡಿರುವ ಸಿದ್ದತಾ ಕ್ರಮಗಳ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 7597 ಬಾಲಕರು, 6787 ಬಾಲಕಿಯರು ಸೇರಿದಂತೆ ಒಟ್ಟು 14384 ವಿದ್ಯಾರ್ಥಿಗಳು ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗಲಿದ್ದು, ಇದಕ್ಕಾಗಿ 88 ಪರೀಕ್ಷಾ ಕೇಂದ್ರಗಳನ್ನು ತೆರೆದಿದ್ದು, ತಲಾ 88 ಮುಖ್ಯ ಅಧೀಕ್ಷಕರು , ಕಸ್ಟೋಡಿಯನ್, ಸ್ಥಾನಿಕ ಜಾಗೃತದಳ ಅಧಿಕಾರಿಗಳು, ಮೊಬೈಲ್ ಸ್ವಾಧೀನಾಧಿಕಾರಿಗಳು ಸೇರಿದಂತೆ ಒಟ್ಟು 2266 ಸಿಬ್ಬಂದಿಗಳನ್ನು ವಿವಿಧ ಕಾರ್ಯಗಳಿಗೆ ನಿಯೋಜಿಸಿದ್ದು, ಈ ಎಲ್ಲಾ ಸಿಬ್ಬಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ಯಾನರ್ ಮೂಲಕ ವಿದ್ಯಾರ್ಥಿಗಳನ್ನು ಪರಿಶೀಲಿಸಬೆಕು, ಸಾಮಾಜಿಕ ಅಂತರ ಕಾಯುವ ನಿಟ್ಟಿನಲ್ಲಿ ಸೂಕ್ತ ಮಾರ್ಕಿಂಗ್ ವ್ಯವಸ್ಥೆ ಮಾಡಿರಬೇಕು, ಕೋವಿಡ್ ಲಕ್ಷಣಗಳಿರುವ ವಿದ್ಯಾರ್ಥಿಗಳು ಕಂಡುಬಂದಲ್ಲಿ ಅವರಿಗೆ ಪ್ರತ್ಯೆಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ಇದಕ್ಕಾಗಿ ಪ್ರತೀ ಪರೀಕ್ಷಾ ಕೇಂದ್ರದಲ್ಲಿ 2 ಮೀಸಲು ಹೆಚ್ಚುವರಿ ಕೊಠಡಿಗಳನ್ನು ಸಿದ್ದಪಡಿಸಲಾಗಿದೆ.

ಪಾಸಿಟಿವ್ ಇರುವ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ, ವಿದ್ಯಾರ್ಥಿಗಳು ಪರೀಕ್ಷಾ ಕೆಂದ್ರಗಳಿಗೆ ಯಾವ ವಾಹನದಲ್ಲಿ ಬರುತ್ತಾರೆ ಎಂಬ ಬಗ್ಗೆ ಆಯಾ ಶಾಲೆಯ ಮುಖ್ಯೋಪಧ್ಯಾಯರು ಮಾಹಿತಿ ಪಡೆಯಬೇಕು, ಯಾವುದೇ ವಿದ್ಯಾರ್ಥಿಗೆ ಪರೀಕ್ಷಾ ಕೇಂದ್ರಕ್ಕೆ ಬರಲು ವಾಹನದ ಅಗತ್ಯವಿದ್ದಲ್ಲಿ ಮುಂಚಿತವಾಗಿ ಮಾಹಿತಿ ನೀಡಬೇಕು, ಜಿಲ್ಲಾಡಳಿತ ಅವರಿಗೆ ಸೂಕ್ತ ವಾಹನ ವ್ಯವಸ್ಥೆ ಮಾಡಲಿದೆ ಎಂದರು.

ಎಸ್.ಎಸ್.ಎಲ್.ಸಿ ಪರೀಕ್ಷೆ ಕುರಿತಂತೆ ಸುಳ್ಳು ಸುದ್ದಿ ಹರಡುವವರ ವಿರುದ್ದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಹಾಗೂ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು ಎಂದು ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಜಿ.ಜಗದೀಶ್ , ಪರೀಕ್ಷಾ ಕೆಂದ್ರಗಳಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಹಾಗೂ ಪ್ರಶ್ನೆ ಪತ್ರಿಕಾ ಸಾಗಾಟ ವಾಹನಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಲು ಅಗತ್ಯವಿದ್ದಲ್ಲಿ ಸೂಕ್ತ ವಾಹನ ವ್ಯವಸ್ಥೆ ಒದಗಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗೆ ಸೂಚಿಸಿದರು.

ಪರೀಕ್ಷೆ ಆರಂಭದ 2 ದಿನಗಳ ಮುಂಚೆ, ಅರೋಗ್ಯ ಇಲಾಖೆ , ಸ್ಕೌಟ್ಸ್ ಮತ್ತು ಗೈಡ್ಸ್ ಹಾಗೂ ಶಿಕ್ಷಣ ಇಲಾಖೆಯಿಂದ ಮಾಕ್ ಡ್ರಿಲ್ ಆಯೋಜಿಸಿ, ಪರೀಕ್ಷಾ ಸಿದ್ದತೆಗ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸುವಂತೆ ಸೂಚಿಸಿದರು. ಪರೀಕ್ಷಾ ಕೇಂದ್ರದಲ್ಲಿ ಸೂಕ್ತ ಕೋವಿಡ್ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಜಿಲ್ಲಾಧಿಕಾರಿ ಸಮರ್ಪಕ ರೀತಿಯಲ್ಲಿ ಎಲ್ಲರೂ ಮಾಸ್ಕ್ ಧರಿಸುವಂತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ಮಾತನಾಡಿ, ಈಗಾಗಲೇ ಗುರುತಿಸಲಾಗಿರುವ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಮತ್ತೊಮ್ಮೆ ಪರಿಶೀಲನೆ ನಡೆಸಿ, ಮಳೆಗಾಲವಾದ್ದರಿಂದ ಕಟ್ಟಡಗಳು ಸೋರದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಿ, ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರದಿಂಧ ಎಲ್ಲಾ ಕೇಂದ್ರಗಳನ್ನು ಸ್ಯಾನಿಟೈಸ್ ಮಾಡಿ ಎಂದು ಸೂಚಿಸಿದರು.

ಸಭೆಯಲ್ಲಿ ಎಎಸ್ಪಿ ಕುಮಾರ ಚಂದ್ರ, ಡಿಡಿಪಿಐ ಎನ್.ಹೆಚ್.ನಾಗೂರ, ಜಿಲ್ಲಾ ಖಜಾನಾಧಿಕಾರಿ ಗೋಪಾಲಸ್ವಾಮಿ, ಡಯಟ್ ಪ್ರಾಂಶುಪಾಲ ವೇದಮೂರ್ತಿ, ಜಿಲ್ಲೆಯ ಎಲ್ಲಾ ಪರೀಕ್ಷಾ ಕೆಂದ್ರಗಳ ಅಧೀಕ್ಷಕರು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!