ಉಡುಪಿ: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ದೇಶಾದ್ಯಂತ 75 ಉಪಗ್ರಹಗಳನ್ನು ಉಡಾವಣೆ ಮಾಡುವ ಹಿನ್ನೆಲೆಯಲ್ಲಿ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮೂಲಕ ಇಸ್ರೋ, ಇಂಡಿಯನ್ ಟೆಕ್ನಾಲಜಿ ಕಾಂಗ್ರೆಸ್ ಅಸೋಸಿಯೇಷನ್, ಕೆ.ಎಸ್.ಸಿ.ಎಸ್.ಟಿ ಹಾಗೂ ಕೆ.ಎಸ್.ಟಿ.ಇ.ಪಿ.ಎಸ್ ಸಹಯೋಗದಲ್ಲಿ ಅನುಷ್ಠಾನ ಮಾಡಲಾಗಿರುವ ಪುನೀತ್ ನ್ಯಾನೋ ಉಪಗ್ರಹ ಯೋಜನೆಯಡಿ ಜಿಲ್ಲೆಯ ಪ್ರೌಢಶಾಲಾ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳು ಭಾಗವಹಿಸುವ ಸಲುವಾಗಿ ರಾಜ್ಯಮಟ್ಟದ ವಿಜ್ಞಾನ ಸಂಬಂಧಿತ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜಿಲ್ಲಾಮಟ್ಟದಿಂದ ರಾಜ್ಯಮಟ್ಟಕ್ಕೆ ಆಯ್ಕೆಯಾಗುವ ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಉಪಗ್ರಹ ಉಡಾವಣೆಯ ವೀಕ್ಷಣೆಗೆ ಶ್ರೀಹರಿಕೋಟಾಕ್ಕೆ ತೆರಳುವ ಅವಕಾಶ ಕಲ್ಪಿಸಲಾಗಿದೆ.
ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಚಿತ್ರ ಬಿಡಿಸುವ ಸ್ಪರ್ಧೆಗಳಿದ್ದು, ಗೂಗಲ್ ಫಾರ್ಮ್ hಣಣಠಿs://ಜಿoಡಿms.gಟe/ಉಚಿSmರಿ3ieeggWಙಖಏಊ6 ನಲ್ಲಿ ಹಾಗೂ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಖಗೋಳಶಾಸ್ತ್ರ ಕುರಿತ ಪೋಸ್ಟರ್ ಪ್ರಸ್ತುತಿ ಸ್ಪರ್ಧೆಗೆ ಗೂಗಲ್ ಫಾರ್ಮ್ hಣಣಠಿs://ಜಿoಡಿms.gಟe/x4zWiqಗಿಘಿoಜಿZ9ಕಿಃಆ97 ನಲ್ಲಿ ಹೆಸರು ಮತ್ತು ವಿವರಗಳನ್ನು ನೋಂದಾಯಿಸಿಕೊಳ್ಳಲು ಸೆಪ್ಟಂಬರ್ 10 ಕೊನೆ ದಿನವಾಗಿದ್ದು, ಜಿಲ್ಲೆಯ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.