ಉಡುಪಿ, ಅ.27: ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಶೈಕ್ಷಣಿಕ ಸಾಲ ಯೋಜನೆ, ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗ ಸಾಲ ಯೋಜನೆ, ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮ, ಸ್ವಾವಲಂಭಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಹ ಒಕ್ಕಲಿಗ ಸಮುದಾಯದ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ, ಗ್ರಾಮ ಒನ್ http://gramaone.karnataka.gov.in, ಬೆಂಗಳೂರು ಒನ್ https://www.karnatakaone.gov.in ಹಾಗೂ ಕರ್ನಾಟಕ ಒನ್ https://k1app.karnatakaone.gov.in ನಲ್ಲಿ ಮತ್ತು ಸ್ವಾತಂತ್ರ ಅಮೃತ ಮುನ್ನಡೆ ಯೋಜನೆಗೆ ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.com ನಲ್ಲಿ ಅಕ್ಟೋಬರ್ 30 ರ ಒಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ಸಾಲ ಯೋಜನೆಗೆ ಕೊನೆಯ ದಿನಾಂಕ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.