ಕಾಂಗ್ರೆಸ್ ಕಾರ್ಯಕರ್ತ ಜಾಲತಾಣದಲ್ಲಿ ಈ ಹಿಂದೆ ಯಾವ ಪೋಸ್ಟ್ ಹಾಕಿದ್ದಾನೆ ಎಂಬ ಅರಿವಿಲ್ಲದೆ ಸಿದ್ದರಾಮಯ್ಯ ಸಮರ್ಥಿಸಿರುವುದು ಅವರ ಬದ್ಧತೆಯನ್ನು ಪ್ರಶ್ನಿಸುತ್ತದೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸಮರ್ಥಿಸುವ ಭರದಲ್ಲಿ ಸೈನಿಕರನ್ನು ಸಿದ್ದರಾಮಯ್ಯ ಅವಮಾನಿಸುತ್ತಿದ್ದಾರೆ. ದೇಶದ್ರೋಹಿ ವ್ಯಕ್ತಿಯನ್ನು ಬೆಂಬಲಿಸುವುದು ನಾಚಿಕೆಗೇಡಿನ ಸಂಗತಿ.
ದೇಶದ್ರೋಹ ಎಂದರೇನು ಎಂದು ಸಿದ್ದರಾಮಯ್ಯರಿಂದ ಪ್ರತ್ಯೇಕವಾಗಿ ಕೇಳಬೇಕಿಲ್ಲ. ಅವರು ಸಿಎಂ ಆಗಿದ್ದಾಗ ದೇಶದ್ರೋಹದ ಹೇಳಿಕೆ ಕೊಡುವಂತವರನ್ನು ಜೊತೆಯಲ್ಲಿಟ್ಟುಕೊಂಡೆ ಕೆಲಸ ಮಾಡಿದವರು. ಅತ್ತಂತೆ ನಟಿಸುವವರ ಸಮರ್ಥನೆಗೆ ನೀವು ಬೇಗ ಬರುತ್ತಿರಿ ಎಂದು ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.