ಮಂಗಳೂರು: ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರವನ್ನು ರದ್ದು ಮಾಡಲಾಗಿದೆ. ಹೆಜಮಾಡಿ ಟೋಲ್ ಕೇಂದ್ರದೊಂದಿಗೆ ಸುರತ್ಕಲ್ ಟೋಲ್ ವಿಲೀನಗೊಂಡಿದೆ. ಸುರತ್ಕಲ್ ಟೋಲ್ ರದ್ದುಗೊಳಿಸಲು ಆಗ್ರಹಿಸಿ ಅಕ್ಟೋಬರ್ 28 ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಯುತ್ತಿದೆ. ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಹೆಚ್ಚುವರಿ ಶುಲ್ಕ ಸಂಗ್ರಹಿಸಲಾಗುವುದೇ ಎಂಬುದನ್ನು ಕಾದುನೋಡಬೇಕಾಗಿದೆ.
ನಳಿನ್ ಕುಮಾರ್ ಕಟೀಲ್ ಟ್ವೀಟ್: ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದ್ದು, ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು.
ಟೋಲ್ ರದ್ದು ಮಾಡುವ ಭರವಸೆಯನ್ನು ಈ ಮೊದಲೇ ಕೇಂದ್ರ ಸಚಿವರು ನೀಡಿದ್ದು, ಈಗ ತಾಂತ್ರಿಕ ಅಂಶ ಪೂರೈಸಲಾಗಿದೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.