Wednesday, April 22, 2026
Wednesday, April 22, 2026

ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ಹೊರರೋಗಿ ಸೇವೆ

ಉಡುಪಿಯ ಡಾ. ಟಿ.ಎಂ.ಎ. ಪೈ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ಹೊರರೋಗಿ ಸೇವೆ

Date:

ಉಡುಪಿ: ಉಡುಪಿಯ ಡಾ. ಟಿ.ಎಂ.ಎ ಪೈ ಆಸ್ಪತ್ರೆಯಲ್ಲಿ 10ನೇ ಜನವರಿ 2022ರ ಸೋಮವಾರದಿಂದ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ಹೊರರೋಗಿ ಸೇವೆಯು ಆರಂಭವಾಗಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರಣ್ ಉಮಾಕಾಂತ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹೊಸ ಸೇವೆಯು ಪ್ರತಿ ಸೋಮವಾರ ಮಧ್ಯಾಹ್ನ 2.00 ರಿಂದ ಸಂಜೆ 5.00 ರವರೆಗೆ ಲಭ್ಯವಿರುತ್ತದೆ. ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಕ್ಯಾನ್ಸರ್ ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರಾದ ಡಾ. ನವೀನ ಕುಮಾರ್ ಎ ಎನ್ ನೇತೃತ್ವದ ತಂಡವು ಎಲ್ಲಾ ರೀತಿಯ ಕ್ಯಾನ್ಸರ್ ಸಮಾಲೋಚನೆಗಾಗಿ ಲಭ್ಯವಿರುತ್ತದೆ.

ಕ್ಯಾನ್ಸರ್ ಕಾಯಿಲೆಯನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರಿಂದ ಅದನ್ನು ಸಂಪೂರ್ಣವಾಗಿ ಗುಣಪಡಿಸುವ ಸಾಧ್ಯತೆ ಹೆಚ್ಚಾಗುತ್ತದೆ. ಈಗ ಈ ಸೇವೆಯನ್ನು ಉಡುಪಿಯಲ್ಲಿಯೇ ಆರಂಭಿಸುತ್ತಿರುವುದರಿಂದ ಸುಲಭದಲ್ಲಿಯೇ ಉಡುಪಿಯ ನಾಗರಿಕರಿಗೆ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯ ದೊರಕಿದಂತಾಗಿದೆ. 

ಉಡುಪಿಯ  ಡಾ.ಟಿ.ಎಂ.ಎ ಪೈ  ಆಸ್ಪತ್ರೆಯಲ್ಲಿ ಆರಂಭಿಸಿದ  ಈ ಹೊಸ ಸೇವೆಯ  ಪ್ರಯೋಜನವನ್ನು ಸಾರ್ವಜನಿಕರು  ಪಡೆಯುವಂತೆ ಡಾ. ಶಶಿಕಿರಣ್ ಉಮಾಕಾಂತ್ ರವರು ಕೋರಿದ್ದಾರೆ.

ಹೆಚ್ಚಿನ ಮಾಹಿತಿ ಮತ್ತು ಪೂರ್ವ ನಿಗದಿಗಾಗಿ (For appointment) ಸಂಪರ್ಕಿಸಿ ದೂ:  7259032864

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನುಷ್ಯ ಮಾನವೀಯನಾಗುವುದು ಮೂಕಜ್ಜಿಯ ಸಂದೇಶ: ಪ್ರೊ.ಸ್ವೀವನ್ ಕ್ವಾಡ್ರಸ್

ಉಡುಪಿ, ಏ.22: ಮನುಷ್ಯ ತನ್ನ ಎಲ್ಲಾ ಸಣ್ಣತನಗಳನ್ನು ಕಳೆದುಕೊಂಡು ಮಾನವೀಯ ವ್ಯಕ್ತಿತ್ವವನ್ನು...

ಹ್ಯಾಕ್ ಫೆಸ್ಟ್ 2026

ಕಾರ್ಕಳ, ಏ.22: ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಫೈನೈಟ್...

ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಯಶಸ್ವಿನ ತಂತ್ರಗಳು

ಬಸ್ರೂರು, ಏ.22: ಶ್ರೀ ಶಾರದಾ ಕಾಲೇಜು ಬಸ್ರೂರು ಗ್ರಂಥಾಲಯ ಮತ್ತು ಮಾಹಿತಿ...

ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ವರ್ಷ- ಭಯೋತ್ಪಾದನಾ ಕೃತ್ಯ ಎಸಗಿದವರಿಗೆ ಭಾರತೀಯ ಸೇನೆಯ ಕಠಿಣ ಎಚ್ಚರಿಕೆ

ಶ್ರೀನಗರ, ಏ.22: ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ವರ್ಷ ಈ ದಿನದಂದು,...
error: Content is protected !!