ಮಣಿಪಾಲ: ಮಹಿಳೆಯು ಇಂದು ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಲು ಹಲವಾರು ಅವಕಾಶಗಳಿವೆ. ಇಂತಹ ಅವಕಾಶಗಳಲ್ಲಿ ಟೈಲರಿಂಗ್ ವೃತ್ತಿ ಒಂದು ಉತ್ತಮ ಆಯ್ಕೆಯಾಗಿದೆ. ಟೈಲರಿಂಗ್ ವಿಷಯವು ಈಗ ಕೇವಲ ಹವ್ಯಾಸವಾಗಿ ಉಳಿಯದೆ ದೊಡ್ಡದಾದ ಉದ್ಯಮವಾಗಿ ಬೆಳೆದಿದೆ ಎಂದು ಎಸ್‌ಎಮ್‌ಇ ಶಾಖೆಯ ಹಿರಿಯ ಪ್ರಬಂಧಕಿ ವಜ್ರೇಶ್ವರಿ ಹೇಳಿದರು.
ಅವರು ಮಣಿಪಾಲದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ 30 ದಿನಗಳ ಕಾಲ ನಡೆಯಲಿರುವ ಉಚಿತ ಮಹಿಳೆಯರ ಟೈಲರಿಂಗ್ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅವರು ಕೆನರಾ ಬ್ಯಾಂಕ್ ಆರ್‌ಸೆಟಿಯು ಉಚಿತವಾಗಿ ನೀಡುತ್ತಿರುವ ತರಬೇತಿಗಳ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತರಬೇತಿಯ ಪ್ರಯೋಜನವನ್ನು ಪಡೆಯಿರಿ ಎಂದು ಶಿಬಿರಾರ್ಥಿಗಳಿಗೆ ಕರೆ ನೀಡಿದರು.
ಸಂಸ್ಥೆಯ ನಿರ್ದೇಶಕಿ ಸವಿತಾ ಎಸ್ ನಾಯಕ್ ಸ್ವಾಗತಿಸಿ, ತರಬೇತಿಯ ಅವಧಿಯಲ್ಲಿ ತಿಳಿಸಲಾಗುವ ವಿಷಯಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು. ಸಂಸ್ಥೆಯ ಕಛೇರಿ ಸಹಾಯಕ ಸಂತೋಷ್ ವಂದಿಸಿ ಸಂಸ್ಥೆಯ ಉಪನ್ಯಾಸಕಿ ಶ್ರೇಯಾ ಕಾರ್ಯಕ್ರಮವನ್ನು ನಿರೂಪಿಸಿದರು.