Friday, September 20, 2024
Friday, September 20, 2024

ನವಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವ: ಸಚಿವ ಸುನೀಲ್ ಕುಮಾರ್

ನವಭಾರತ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವ: ಸಚಿವ ಸುನೀಲ್ ಕುಮಾರ್

Date:

ಉಡುಪಿ: ವಿದ್ಯಾರ್ಥಿಗಳ ಮೂಲಕ ಭವಿಷ್ಯದ ಭಾರತ ನಿರ್ಮಾಣ ಮಾಡುವ ಹೊಣೆಗಾರಿಕೆ ಶಿಕ್ಷಕರಿಗಿದ್ದು ದೇಶದ ಹಲವು ಸಮಸ್ಯೆಗಳನ್ನು ಬಗೆಹರಿಸಿ, ನವಭಾರತ ನಿರ್ಮಾಣ ಮಾಡುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ಹೇಳಿದರು.

ಅವರು ಇಂದು ಉಡುಪಿ ಸೈಂಟ್ ಸಿಸಿಲಿ ಪ್ರೌಢಶಾಲೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿದೇರ್ಶಕರ ಕಚೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ ಇವರ ಸಹಯೋಗದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ದೇಶದ ಸ್ವಾತ್ರಂತ್ರ್ಯದ ಅಮೃತ ಮಹೋತ್ಸವದ ಈ ಸಮಯದಲ್ಲಿ ಸ್ವಾತ್ರಂತ್ರ್ಯ ಪೂರ್ವದಲ್ಲಿನ ಹಲವು ಸಮಸ್ಯೆಗಳೊಂದಿಗೆ ಹಲವು ಹೊಸ ಸಮಸ್ಯೆಗಳು ಸೃಷ್ಠಿಯಾಗಿವೆ. ಇವುಗಳ ಪರಿಹಾರಕ್ಕೆ ಪ್ರಧಾನಮಂತ್ರಿಗಳ ನವಭಾರತ ನಿರ್ಮಾಣದ ಸಾಕಾರ ಶಾಲೆಗಳಿಂದಲೇ ಆರಂಭವಾಗಬೇಕಿದೆ. ಈ ನಿಟ್ಟಿನಲ್ಲಿ ಶಿಕ್ಷಕರು ಉತ್ತಮ ವಿದ್ಯಾರ್ಥಿಗಳನ್ನು ನಿರ್ಮಾಣ ಮಾಡುವ ಮೂಲಕ ನವಭಾರತ ನಿರ್ಮಾಣಕ್ಕೆ ಬದ್ದರಾಗಬೇಕು ಎಂದರು.

ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿಯನ್ನು ರೂಪಿಸಿದ್ದು, ಇದರಲ್ಲಿನ ಅಂಶಗಳ ಕುರಿತು ಶಿಕ್ಷಕರು ತಿಳಿದುಕೊಂಡು, ಅದನ್ನು ದೊಡ್ಡ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ಹಸ್ತಾಂತರಿಸುವುದರಿಂದ ದೇಶದಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗಲಿದೆ ಎಂದು ಸಚಿವರು ಹೇಳಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಹೊರತರುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾದುದು. ಕೋವಿಡ್ ಸಂಕಷ್ಟದಲ್ಲಿಯೂ ಸಹ ಜಿಲ್ಲೆಯ ಶಿಕ್ಷಕರು ಜಿಲ್ಲಾಡಳಿತ ಸೂಚಿಸಿರುವ ಹೆಚ್ಚುವರಿ ಕರ್ತವ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಕೆ. ರಘುಪತಿ ಭಟ್ ಮಾತನಾಡಿ, ಜಿಲ್ಲೆಯಲ್ಲಿ ಹಿಂದಿನ ಶಿಕ್ಷಕರು ಮತ್ತು ಈಗಿನ ಶಿಕ್ಷಕರು, ಶೈಕ್ಷಣಿಕ ಗುಣಮಟ್ಟವನ್ನು ಉಳಿಸಿ, ಬೆಳೆಸಿ, ಉತ್ತಮ ಸೇವೆ ಸಲ್ಲಿಸಿರುವ ಕಾರಣ ಜಿಲ್ಲೆಗೆ ರಾಜ್ಯದಲ್ಲಿ ಅತ್ಯುತ್ತಮ ಶೈಕ್ಷಣಿಕ ಜಿಲ್ಲೆ ಎಂಬ ಹೆಗ್ಗಳಿಕೆ ಇದೆ ಎಂದರು.

“ಬಿಂಬ” ವಾರ್ಷಿಕ ಸಂಚಿಕೆ ಮತ್ತು ಶಿಕ್ಷಕರ ಗುರುತಿನ ಚೀಟಿಯನ್ನು ಸಚಿವ ವಿ.ಸುನೀಲ್ ಕುಮಾರ್ ಬಿಡುಗಡೆ ಮಾಡಿದರು. ಕಾಯಕ್ರಮದಲ್ಲಿ ಜಿಲ್ಲಾ ಪ್ರಶಸ್ತಿ ವಿಜೇತ 17 ಮಂದಿ ಶಿಕ್ಷಕರು, 43 ಮಂದಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು.

ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ನಗರಾಭಿವೃದ್ದಿ ಪ್ರಾಧಿಕಾರ ಅಧ್ಯಕ್ಷ ಕೆ. ರಾಘವೇಂದ್ರ ಕಿಣಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಉಪಸ್ಥಿತರಿದ್ದರು. ಡಿಡಿಪಿಐ ಎನ್.ಹೆಚ್. ನಾಗೂರ್ ಸ್ವಾಗತಿಸಿ, ಉಡುಪಿ ಬಿಇಓ ನಾಗೇಂದ್ರಪ್ಪ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!