ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗ ಮತ್ತು ಸಮಾಜಶಾಸ್ತ್ರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ರಂಗ ತರಬೇತಿ ಕಾರ್ಯಾಗಾರ ಕಾಲೇಜು ಸಭಾಂಗಣದಲ್ಲಿ ಜರಗಿತು.
ಪ್ರಾಂಶುಪಾಲರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ಪದವಿಗಳಿಗೂ ಕೌಶಲ್ಯ ಮುಖ್ಯ. ಕೌಶಲ್ಯಗಳನ್ನು ಬೆಳೆಸುವ ಬೀದಿ ನಾಟಕ ಹಾಗೂ ವೇದಿಕೆ ಬಳಸುವ ತರಬೇತಿಗಳು ಮುಖ್ಯವಾಗುತ್ತವೆ ಎಂದರು.
ಸಂಪನ್ಮೂಲ ವ್ಯಕ್ತಿಯಾಗಿ ಜಗನ್ ಪವಾರ್ ಪ್ರಸ್ತಾವಿಕವಾಗಿ ಮಾತನಾಡಿದರು.
ಸ್ನಾತಕೋತ್ತರ ಸಮಾಜಕಾರ್ಯ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್ ಮಾತನಾಡುತ್ತಾ, ಭಾರತದ ಸಮಕಾಲೀನ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಮಾಜಕಾರ್ಯ ಮುಖ್ಯವಾಗುತ್ತದೆ ಎಂದರು.
ಐಕ್ಯೂಎಸಿ ಸಂಯೋಜಕ ಡಾ. ಸುರೇಶ್ ರೈ, ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಘವ ನಾಯ್ಕ್, ಸಮಾಜಕಾರ್ಯ ಸಹಾಯಕ ಪ್ರಾಧ್ಯಾಪಕಿ ಸುಷ್ಮಾ ಟಿ ಉಪಸ್ಥಿತರಿದ್ದರು.
ಪ್ಲೇಸ್ಮೆಂಟ್ ಅಧಿಕಾರಿ ಉಮೇಶ್ ಪೈ ಸ್ವಾಗತಿಸಿ, ಸಮಾಜಶಾಸ್ತ್ರ ವಿಭಾಗದ ಶಬ್ಬೀರ್ ವಂದಿಸಿದರು. ಸಂಧ್ಯಾ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.