ಉಡುಪಿ, ಸೆ.20: ಆರಾಧ್ಯ ಮೂರ್ತಿ ಶ್ರೀ ತಿರುಪತಿ ತಿಮ್ಮಪ್ಪನ ಪವಿತ್ರ ಪ್ರಸಾದಕ್ಕೆ ಅಪಚಾರಗೈದು ಲಡ್ಡು ಪ್ರಸಾದದಲ್ಲಿ ದನದ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಸಿರುವುದು ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಇದರ ಹೊಣೆಯನ್ನು ಸಂಪೂರ್ಣವಾಗಿ ಈ ಹಿಂದಿನ ಅಲ್ಲಿನ ಸರ್ಕಾರವೇ ಹೊರಬೇಕು. ದೇವಾಲಯದ ಆಡಳಿತ ಮಂಡಳಿ ಸೇರಿದಂತೆ ರಾಜ್ಯದಾದ್ಯಂತ ಹಿಂದೂ ವಿರೋಧಿ ಮಾನಸಿಕತೆ ಇರುವ ಹಾಗೂ ಅನ್ಯ ಧರ್ಮೀಯರನ್ನು ನೇಮಿಸಿದ್ದೇ ಇದಕ್ಕೆ ಪ್ರಮುಖ ಕಾರಣ. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಮುಂದಿನ ದಿನಗಳಲ್ಲಿ ಇಂತಹ ತಪ್ಪು ಮರುಕಳಿಸದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಗ್ರಹಿಸಿದ್ದಾರೆ.
ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ

ತಿರುಪತಿ ಪ್ರಸಾದಕ್ಕೆ ಅಪಚಾರ- ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ
Date: