Friday, September 27, 2024
Friday, September 27, 2024

ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೋತ್ಸಾಹಧನ ವಿತರಣೆ

ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರೋತ್ಸಾಹಧನ ವಿತರಣೆ

Date:

ಬೈಂದೂರು: ಪ್ರತಿ ವರುಷ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದ ವಿದ್ಯಾರ್ಥಿಗೆ ನಾವುಂದ ಸರಕಾರಿ ಪದವಿ ಪೂರ್ವ ಕಾಲೇಜಿನ 1995-96ನೇ ಸಾಲಿನ ವಿದ್ಯಾರ್ಥಿಗಳ ವತಿಯಿಂದ ನೀಡಲ್ಪಡುವ ಹತ್ತು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು. ಈ ವರುಷ ಕಾಲೇಜಿಗೆ ಪ್ರಥಮ ಸ್ಥಾನವನ್ನು ಪಡೆದ ವಿಭಾಗದ ವಿದ್ಯಾರ್ಥಿ ಚವೀಶ್ ಜೈನ್ ಅವರಿಗೆ ಈ ಪ್ರೋತ್ಸಾಹಧನವನ್ನು ನೀಡಲಾಯಿತು.

ಆನ್ಲೈನ್ ಮೂಲಕ ನಡೆದ ಈ ಕಾರ್ಯಕ್ರಮದಲ್ಲಿ 1995-96ನೇ ಸಾಲಿನ ಕಾಲೇಜಿನ ವಿದ್ಯಾರ್ಥಿಗಳಾದ ವಿನಾಯಕ ಹೆಬ್ಬಾರ್, ಡಾ. ರಾಘವೇಂದ್ರ ಶೆಟ್ಟಿ, ರೇಖಾ ಶೆಟ್ಟಿ, ಕೃಷ್ಣಮೂರ್ತಿ ಉಪಸ್ಥಿತರಿದ್ದು ಕಾಲೇಜಿನ ದಿನಗಳ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ವಿದ್ಯಾರ್ಥಿಗೆ ಶುಭಕೋರಿದರು.

ಕಾಲೇಜಿನ ಪ್ರಾಂಶುಪಾಲ ಅರುಣ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಗಣಿತಶಾಸ್ತ್ರ ಉಪನ್ಯಾಸಕಿ ಸಾವಿತ್ರಿ ಎಸ್ ಕಾರ್ಯಕ್ರಮ ನಿರೂಪಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ಸುಮಿತ್ರ ವಂದಿಸಿದರು. ಪ್ರಸಕ್ತ ಸಾಲಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಕ್ರೀಡಾಕೂಟ: ಶಾರದಾ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಉಡುಪಿ, ಸೆ.27: ಉಡುಪಿ ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಆಶ್ರಯದಲ್ಲಿ...

ಫಲಕ ಉದ್ಘಾಟನೆ

ಉಡುಪಿ, ಸೆ.27: ಆಮ್ ಕೇರ್ ಕ್ಲಿನಿಕ್, ರೋಟರಿ ಉಡುಪಿ ಮತ್ತು ಇನ್ನರ್...

‘ಮಲಬಾರ್ ವಿಶ್ವ ಸಾಹಿತ್ಯ ಪುರಸ್ಕಾರ-2024ಕ್ಕೆ’ ಮೂವರು ಹಿರಿಯ ಸಾಹಿತಿಗಳ ಆಯ್ಕೆ

ಉಡುಪಿ, ಸೆ.27: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್...

ಜಿಲ್ಲಾಮಟ್ಟದ ಟೆನ್ನಿಕಾಯ್ಟ್: ಸರಸ್ವತಿ ವಿದ್ಯಾಲಯ ಪ್ರಥಮ

ಗಂಗೊಳ್ಳಿ, ಸೆ.26: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮತ್ತು ಸರಸ್ವತಿ ವಿದ್ಯಾಲಯ...
error: Content is protected !!