Saturday, February 7, 2026
Saturday, February 7, 2026

ಅರಣ್ಯ ಉಳಿಯಲು ಬುಡಕಟ್ಟು ಜನರೇ ಕಾರಣ: ದಿನೇಶ್ ಹೊಳ್ಳ

ಅರಣ್ಯ ಉಳಿಯಲು ಬುಡಕಟ್ಟು ಜನರೇ ಕಾರಣ: ದಿನೇಶ್ ಹೊಳ್ಳ

Date:

ಮಣಿಪಾಲ: ಅರಣ್ಯ ಇಂದು ಉತ್ತಮವಾಗಿ ಉಳಿಯಲು ಅಲ್ಲಿ ವಾಸ ಮಾಡುವ ಬುಡಕಟ್ಟು ಜನಾಂಗದವರು ಪ್ರಮುಖ ಕಾರಣ, ಸರ್ಕಾರ ಈ ಜನಾಂಗದವರ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗಿದೆ ಎಂದು ಖ್ಯಾತ ಕಲಾವಿದ ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಹೇಳಿದರು.

ಅವರು ರೋಟರಿ ಮಣಿಪಾಲ ಹಾಗೂ ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಆಶ್ರಯದಲ್ಲಿ ಮಣಿಪಾಲದ ರೋಟರಿ ಭವನದಲ್ಲಿ ನಡೆದ ವನ ಚೇತನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಉ.ಕ ಭಾಗದ ಅರಣ್ಯ ಪರಿಸರದಲ್ಲಿ ವಾಸ ಮಾಡುವ ಸಿದ್ಧಿ, ಹಾಲಕ್ಕಿ, ಕುಡುಬಿ ಮುಂತಾದ ಬುಡಕಟ್ಟು ಜನಾಂಗದವರ ಪರಿಸರ ಕುರಿತ ಕಾಳಜಿಯನ್ನು ವಿವರಿಸಿದರು. ಸರ್ಕಾರ ಅವರ ಅಭಿವೃದ್ಧಿಗೆ ಹಲವಾರು ಕೋಟಿ ರೂ ಖರ್ಚು ಮಾಡಿದರೂ, ಆ ಹಣ ಸರಿಯಾಗಿ ತಲುಪದೆ ಅಭಿವೃದ್ಧಿಯು ಗಗನ ಕುಸುಮವಾಗಿದೆ.

ಕೊರೋನಾ ಸಮಯದಲ್ಲಿ ಅಲ್ಲಿನ ಬುಡಕಟ್ಟು ಜನಾಂಗದ ಮಕ್ಕಳಿಗೆ ನಡೆಸಲಾದ ವನ ಚೇತನ ಮತ್ತು ವನ ಬೆಳಕು ಯೋಜನೆಯ ಮೂಲಕ ಮಾಡಿದ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು. ಅವರಿಗೆ ಸರಿಯಾದ ಅವಕಾಶಗಳು ಸಿಕ್ಕಿದ್ದಲ್ಲಿ ಮುಂದೆ ಅವರೆಲ್ಲರೂ ಸಮಾಜದಲ್ಲಿ ಉತ್ತಮ ಜೀವನ ಸಾಗಿಸಬಹುದೆಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಅವರಿಗೆ ರೂ 10 ಸಾವಿರ ನಗದಿನೊಂದಿಗೆ ಸನ್ಮಾನಿಸಯಿತು. ಗೃಹ ನಿರ್ಮಾಣಕ್ಕಾಗಿ ವಿಜಯಲಕ್ಷ್ಮಿ ಕುಟುಂಬಕ್ಕೆ ರೂ. 50000 ಮೊತ್ತವನ್ನು ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷರಾದ ವಿಶ್ವನಾಥ ಶೆಣೈ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಮಣಿಪಾಲ್ ಅಧ್ಯಕ್ಷರಾದ ಡಾ. ವಿರೂಪಾಕ್ಷ ದೇವರಮನೆ ವಹಿಸಿ ಶುಭ ಹಾರೈಸಿದರು. ವೇದಿಕೆಯಲ್ಲಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಅಧ್ಯಕ್ಷರಾದ ಪ್ರೊ. ಶಂಕರ್, ರೋಟರಿ ಕ್ಲಬ್ ಮಣಿಪಾಲ್ ಇದರ ನಿಯೋಜಿತ ಅಧ್ಯಕ್ಷೆ ರೇಣು ಜಯರಾಮ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!