Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಇಬ್ಬರಲ್ಲಿ ಒಮಿಕ್ರಾನ್ ಪತ್ತೆ

ಉಡುಪಿ: ಇಬ್ಬರಲ್ಲಿ ಒಮಿಕ್ರಾನ್ ಪತ್ತೆ

1001
0

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19ನ ಹೊಸ ರೂಪಾಂತರಿ ಒಮಿಕ್ರಾನ್ ಪತ್ತೆಯಾಗಿದೆ.

ಜಾಹೀರಾತು

ಈ ಕುರಿತು ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ. ಸುಧಾಕರ್, ರಾಜ್ಯದಲ್ಲಿ 5 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು ಉಡುಪಿಯಲ್ಲಿ 82 ವರ್ಷದ ಪುರುಷ ಹಾಗೂ 73 ವರ್ಷದ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಜಾಹೀರಾತು

ಇನ್ನುಳಿದ 3 ಒಮಿಕ್ರಾನ್ ಪ್ರಕರಣಗಳು ಧಾರವಾಡ, ಭದ್ರಾವತಿ ಮತ್ತು ಮಂಗಳೂರಿನಲ್ಲಿ ಪತ್ತೆಯಾಗಿದೆ.

ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ: ಅನಾವಶ್ಯಕ ಗುಂಪು ಸೇರದಿರುವುದು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಲಸಿಕೆ ಪಡೆಯದವರಿಗೆ ಲಸಿಕೆ ಪಡೆಯುವಂತೆ ಮನವೊಲಿಸುವುದು, ಕೈಗಳ ಸ್ವಚ್ಛತೆಯನ್ನು ಕಾಪಾಡುವುದು ಅತ್ಯವಶ್ಯಕವಾಗಿದೆ.

ಜಾಹೀರಾತು

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.