Wednesday, April 1, 2026
Wednesday, April 1, 2026

ಸರಕಾರಿ ಜಮೀನು ಒತ್ತುವರಿ ಪ್ರಕರಣ ಪತ್ತೆಹಚ್ಚಿ ಅತಿಕ್ರಮಣ ತೆರವುಗೊಳಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ

ಸರಕಾರಿ ಜಮೀನು ಒತ್ತುವರಿ ಪ್ರಕರಣ ಪತ್ತೆಹಚ್ಚಿ ಅತಿಕ್ರಮಣ ತೆರವುಗೊಳಿಸಿ: ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ

Date:

ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳನ್ನು ಖಾಸಗಿ ವ್ಯಕ್ತಿಗಳು ಒತ್ತುವರಿ ಮಾಡುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತು ಆಯಾ ತಾಲೂಕು ತಹಶೀಲ್ದಾರರುಗಳು ವೈಯಕ್ತಿಕ ಗಮನಹರಿಸಿ ತಮ್ಮ ತಾಲೂಕು ವ್ಯಾಪ್ತಿಯ ಎಲ್ಲಾ ಸ್ಥಳಗಳಿಗೆ ಭೇಟಿ ನೀಡಿ, ಸರಕಾರಿ ಜಮೀನುಗಳು ಅತಿಕ್ರಮಣವಾಗಿರುವ ಪ್ರಕರಣಗಳನ್ನು ಪತ್ತೆಹಚ್ಚಿ, ಅತಿಕ್ರಮಣವನ್ನು ತೆರವುಗೊಳಿಸಬೇಕು. ಸದ್ರಿ ಜಮೀನನ್ನು ಸರಕಾರದ ವಶಕ್ಕೆ ಪಡೆದು ಸೂಚನಾ ಬೋರ್ಡ್ ಹಾಗೂ ತಡೆಬೇಲಿಯನ್ನು ಅಳವಡಿಸಿ, ಸರ್ಕಾರಿ ಜಮೀನನ್ನು ಅತಿಕ್ರಮಣ ಮಾಡಿದವರ ಮೇಲೆ ಕಾನೂನು ಕ್ರಮ ವಹಿಸಲು ಹಾಗೂ ಇದಕ್ಕೆ ಸಹಕಾರ ನೀಡಿ ಅತಿಕ್ರಮಣಕ್ಕೆ ಕಾರಣರಾದ ಕಂದಾಯ ಇಲಾಖಾ ನೌಕರರ ವಿರುದ್ಧ ಶಿಸ್ತು ಕ್ರಮ ವಹಿಸಲು ಪ್ರಸ್ತಾವನೆ ಸಲ್ಲಿಸಬೇಕು.

ಈ ಕುರಿತು ತಹಶೀಲ್ದಾರರುಗಳು ಪ್ರತಿದಿನ ಕೈಗೊಂಡ ಕ್ರಮದ ಬಗ್ಗೆ ವಿಸ್ತೃತ ವರದಿಯನ್ನು ಜೂನ್ 11 ರ ಸಂಜೆ 4 ಗಂಟೆಯ ಒಳಗೆ ಜಿಲ್ಲಾಧಿಕಾರಿ ಕಚೇರಿಗೆ, ಕುಂದಾಪುರ ಸಹಾಯಕ ಕಮೀಷನರ್ ಮೂಲಕ ಇ-ಮೇಲ್‌ನಲ್ಲಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತೀಯ ನೌಕಾಪಡೆಗೆ ಯುದ್ಧ ನೌಕೆ ‘ಮಾಲ್ವಾನ್’ ಸೇರ್ಪಡೆ

ಕೊಚ್ಚಿ, ಏ.1: ಕೊಚ್ಚಿಯಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ ನಿರ್ಮಿಸಿದ ಎರಡನೇ ಜಲಾಂತರ್ಗಾಮಿ...

ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ

ನವದೆಹಲಿ, ಮಾ.31: ಮಾಜಿ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಮಂಗಳವಾರ ನವದೆಹಲಿಯ...

ನನ್ನಮ್ಮ

ನನ್ನಮ್ಮನ ಕುರಿತು ಬರೆಯಲು ಪದಗಳೇ ಸಾಲದು... ನನ್ನಮ್ಮ ಅಂತ ಅಲ್ಲ, ಅಮ್ಮ...

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಜೊತೆ ರಕ್ಷಣಾ ಸಚಿವಾಲಯ ರೂ.1950 ಕೋಟಿ ಒಪ್ಪಂದಕ್ಕೆ ಸಹಿ

ನವದೆಹಲಿ, ಮಾ.31: ಭಾರತೀಯ ವಾಯುಪಡೆಗೆ ಎರಡು ಪರ್ವತ ರಾಡಾರ್‌ಗಳ ಖರೀದಿಗಾಗಿ ರಕ್ಷಣಾ...
error: Content is protected !!