ಉಡುಪಿ, ಜು. 21: ನಿರಂತರ ಮಳೆಯಿಂದ ಹಾನಿಗೊಳಗಾದ ಉಡುಪಿ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅಧಿಕಾರಿಗಳ ಜೊತೆಗೆ ಭಾನುವಾರ ಭೇಟಿ ನೀಡಿದರು.
ಮಳೆಯಿಂದ ಹಾನಿಗೊಳಗಾಗಿರುವ ಬ್ರಹ್ಮಾವರ ತಾಲೂಕಿನ ಕೋಟಾ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಕಾಪು ತಾಲೂಕಿನ ಪಡುಬಿದ್ರೆ ಹತ್ತಿರವಿರುವ ನಡುಪಟ್ಲ ಕಡಲತೀರಕ್ಕೆ ಸಚಿವರು ಭೇಟಿ ನೀಡಿ, ಕಡಲ್ಕೊರೆತ ಪ್ರಮಾಣದ ಕುರಿತು ಮಾಹಿತಿ ಪಡೆದರು.
ಗುಡ್ಡ ಕುಸಿತ ಭೀತಿಯಲ್ಲಿರುವ ಉಡುಪಿಯ ಬೈಂದೂರಿನ ಒತ್ತಿಣೆನೆ ಪ್ರದೇಶಕ್ಕೆ ಭೇಟಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಗುಡ್ಡ ಕುಸಿತಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಉಡುಪಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಕುಂದಾಪುರ ವಿಭಾಗದ ಸಹಾಯಕ ಆಯುಕ್ತರಾದ ಎಸ್.ಆರ್. ರಶ್ಮಿ, ಡಿಎಫ್ ಒ ಗಣಪತಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.