Monday, January 20, 2025
Monday, January 20, 2025

ಸಕಾಲ: ಉಡುಪಿ ಜಲ್ಲೆಗೆ ಪ್ರಥಮ ಸ್ಥಾನ

ಸಕಾಲ: ಉಡುಪಿ ಜಲ್ಲೆಗೆ ಪ್ರಥಮ ಸ್ಥಾನ

Date:

ಉಡುಪಿ: ಸಕಾಲ ಯೋಜನೆಯಡಿಯ ವಿಳಂಬ ರಹಿತ ಅರ್ಜಿ ವಿಲೇವಾರಿಯಲ್ಲಿ ಉಡುಪಿ ಜಿಲ್ಲೆಯು ಜುಲೈ ಮಾಹೆಯಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಮುಂದಿನ ದಿನಗಳಲ್ಲಿಯೂ ಉತ್ತಮವಾಗಿ ಕಾರ್ಯ ನಿರ್ವಹಿಸುವುದರೊಂದಿಗೆ ಪ್ರಥಮ ಸ್ಥಾನ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅಧಿಕಾರಿಗಳಿಗೆ ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಕಾಲ ಯೋಜನೆಯ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಸಕಾಲ ಯೋಜನೆಯು ನಾಗರಿಕರಿಗೆ ಸರಕಾರದ ಸೇವೆಯನ್ನು ನಿಗದಿತ ಕಾಲಾವಧಿಯಲ್ಲಿ ಒದಗಿಸುವ ಪ್ರಮುಖ ಯೋಜನೆಯಲ್ಲಿ ಒಂದಾಗಿದ್ದು, ಸಾರ್ವಜನಿಕರು ಸರಕಾರದ 101 ವಿವಿಧ ಇಲಾಖೆಗಳಲ್ಲಿ 1,112 ಸೇವೆಗಳಿಗೆ ನಿಗದಿತ ಪ್ರಮಾಣದಲ್ಲಿ ಅರ್ಜಿ ಸಲ್ಲಿಸಿ, ಸೇವೆಯ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

ಸಾರ್ವಜನಿಕರು ಸಕಾಲದಡಿಯಲ್ಲಿ ನಿಗದಿತ ಅರ್ಜಿಯನ್ನು ಸಲ್ಲಿಸಿದಾಗ ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಸಲ್ಲಿಸಿದಾಗ ಶೀಘ್ರದಲ್ಲಿಯೇ ಅರ್ಜಿಗಳನ್ನು ವಿಲೇವಾರಿ ಮಾಡಲು ಸಾಧ್ಯವಾಗುತ್ತದೆ. ಎಂದ ಅವರು ಅಧಿಕಾರಿಗಳು ನಿಗದಿತ ಕಾಲಾವಧಿಯಲ್ಲಿ ಅವುಗಳನ್ನು ತಡವಿಲ್ಲದೇ ವಿಲೇವಾರಿ ಮಾಡಬೇಕು ಎಂದರು.

ವಿವಿಧ ಸೇವೆಗಳನ್ನು ಪಡೆಯಲು ನಾಗರಿಕರು ಸಲ್ಲಿಸುವ ಅರ್ಜಿಗಳ ತಿರಸ್ಕಾರದ ಪ್ರಮಾಣವನ್ನು ಆದಷ್ಟು ಕಡಿಮೆ ಮಾಡಬೇಕು. ಸಕಾರಣವಿಲ್ಲದೆ ಯಾವುದೇ ಅರ್ಜಿಗಳನ್ನು ತಿರಸ್ಕಾರ ಮಾಡಬಾರದು ಒಂದೊಮ್ಮೆ ತಿರಸ್ಕಾರ ಮಾಡುವಾಗ ಸರಿಯಾದ ಕಾರಣವನ್ನು ನೀಡಬೇಕು ಎಂದರು.

ಪ್ರಸ್ತುತ ಮಾಹೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಸರ್ಕಾರದ ಅಡಿಯಲ್ಲಿ 59,237 ಅರ್ಜಿಗಳು ಬಂದಿದ್ದು ಅವುಗಳಲ್ಲಿ 52,511 ಅರ್ಜಿಗಳು ಪುರಸ್ಕೃತಗೊಂಡು 1,094 ಅರ್ಜಿಗಳು ತಿರಸ್ಕೃತಗೊಂಡಿವೆ ಎಂದರು. ಸಕಾಲ ಯೋಜನೆಯು 2011 ರಿಂದ ರಾಜ್ಯದಲ್ಲಿ ಜಾರಿಗೆ ಬಂದಿದ್ದು ಈವರೆಗೆ 6.53 ಕೋಟಿ ಅರ್ಜಿಗಳು ಬಂದಿದ್ದು, ಅವುಗಳಲ್ಲಿ 5.98 ಕೋಟಿಯಷ್ಟು ಪುರಸ್ಕೃತಗೊಂಡು 45.02 ಲಕ್ಷ ತಿರಸ್ಕೃತಗೊಂಡು 6.43 ಕೋಟಿ ವಿಲೇವಾರಿಯಾಗಿದೆ ಎಂದರು. ಈವರೆಗೆ ಜಿಲ್ಲೆಯಲ್ಲಿ 14.15 ಲಕ್ಷ ಅರ್ಜಿಗಳು ಬಂದಿದ್ದು, ಅವುಗಳಲ್ಲಿ 13.58 ರಷ್ಟು ಅರ್ಜಿಗಳು ಪುರಸ್ಕೃತಗೊಂಡು 42,194 ಅರ್ಜಿಗಳು ವಿಲೇವಾರಿಗೊಂಡಿವೆ ಎಂದರು.

ಅಧಿಕಾರಿಗಳು ಮುತುವರ್ಜಿ ವಹಿಸಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ವಿಲೇವಾರಿ ವಿಳಂಬ ಮಾಡಿದವರಿಗೆ ದಂಡ ವಿಧಿಸುವ ಅವಕಾಶವಿದೆ, ಅಲ್ಲದೇ ವಿಳಂಬವಾದಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ ಎಂದರು. ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಕಾಲ ಯೋಜನೆಯ ನೋಡೆಲ್ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!