ಉಡುಪಿ: ಉಡುಪಿ ಜಿಲ್ಲೆಯಲ್ಲಿ 98 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-51, ಕುಂದಾಪುರ-28, ಕಾರ್ಕಳ-17, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 118 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71768 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1523 ಸಕ್ರಿಯ ಪ್ರಕರಣಗಳಿವೆ.
ಮೂವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 452 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 29 ರಂದು 7872 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 958424 ಮಾದರಿಗಳನ್ನು ಪರೀಕ್ಷಿಸಲಾಗಿದೆ.