ಉಡುಪಿ: ಉಡುಪಿ ಜಿಲ್ಲೆಯಲ್ಲಿ 150 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-73, ಕುಂದಾಪುರ-31, ಕಾರ್ಕಳ-45, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 158 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 71926 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1514 ಸಕ್ರಿಯ ಪ್ರಕರಣಗಳಿವೆ.
ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 453 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 30 ರಂದು 10,438 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 968862 ಮಾದರಿಗಳನ್ನು ಪರೀಕ್ಷಿಸಲಾಗಿದೆ.