ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಬ್ಬರಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-1, ಕುಂದಾಪುರ-0, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. ಓರ್ವ ವ್ಯಕ್ತಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76421 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 59 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 10 ರಂದು 3599 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1311110 ಮಾದರಿಗಳನ್ನು ಪರೀಕ್ಷಿಸಲಾಗಿದೆ.