ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 (ಎಲ್ಲರೂ ಉಡುಪಿ ತಾಲೂಕಿನವರು) ಮಂದಿಗೆ ಸೋಂಕು ದೃಢಪಟ್ಟಿದೆ. 5 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76467 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 28 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 16 ರಂದು 1283 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1325882 ಮಾದರಿಗಳನ್ನು ಪರೀಕ್ಷಿಸಲಾಗಿದೆ.