ಉಡುಪಿ: ಉಡುಪಿ ಜಿಲ್ಲೆಯಲ್ಲಿ 8 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-7, ಕುಂದಾಪುರ-1, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 13 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76378 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 76 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಕುಂದಾಪುರ ತಾಲೂಕಿನ 65 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಡಿಸೆಂಬರ್ 3 ರಂದು 5652 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1284266 ಮಾದರಿಗಳನ್ನು ಪರೀಕ್ಷಿಸಲಾಗಿದೆ.