ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಬ್ಬರು ಸೋಂಕಿತರಾಗಿದ್ದಾರೆ. ಉಡುಪಿ ತಾಲೂಕು-1, ಕುಂದಾಪುರ-0, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 5 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76386 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 75 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 5 ರಂದು 2968 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1291637 ಮಾದರಿಗಳನ್ನು ಪರೀಕ್ಷಿಸಲಾಗಿದೆ.