ಉಡುಪಿ: ಉಡುಪಿ ಜಿಲ್ಲೆಯಲ್ಲಿ 202 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-117, ಕುಂದಾಪುರ-50, ಕಾರ್ಕಳ-33, ಹೊರ ಜಿಲ್ಲೆ- 2 ಸೋಂಕಿಗೆ ಒಳಗಾಗಿದ್ದಾರೆ.
460 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2168 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 9.4 ರಷ್ಟಿದೆ.
ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಫೆಬ್ರವರಿ 4 ರಂದು 1950 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.