ಉಡುಪಿ: ಉಡುಪಿ ಜಿಲ್ಲೆಯಲ್ಲಿ 64 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-40, ಕುಂದಾಪುರ-14, ಕಾರ್ಕಳ-7, ಹೊರ ಜಿಲ್ಲೆ- 3 ಸೋಂಕಿಗೆ ಒಳಗಾಗಿದ್ದಾರೆ.
27 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1799 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 4.6 ರಷ್ಟಿದೆ.
ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಫೆಬ್ರವರಿ 7 ರಂದು 1275 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.