ಉಡುಪಿ: ಉಡುಪಿ ಜಿಲ್ಲೆಯಲ್ಲಿ 28 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-26, ಕುಂದಾಪುರ-2, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 12 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76532 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 140 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 479 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 31 ರಂದು 5581 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1379986 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.