ಉಡುಪಿ: ಉಡುಪಿ ಜಿಲ್ಲೆಯಲ್ಲಿ 497 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-354, ಕುಂದಾಪುರ-68, ಕಾರ್ಕಳ-70, ಹೊರ ಜಿಲ್ಲೆ- 5 ಸೋಂಕಿಗೆ ಒಳಗಾಗಿದ್ದಾರೆ. 76 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2335 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 10.20 ರಷ್ಟಿದೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 13 ರಂದು 6652 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.