ಉಡುಪಿ: ಉಡುಪಿ ಜಿಲ್ಲೆಯಲ್ಲಿ 801 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-533, ಕುಂದಾಪುರ-194, ಕಾರ್ಕಳ-67, ಹೊರ ಜಿಲ್ಲೆ-7 ಸೋಂಕಿಗೆ ಒಳಗಾಗಿದ್ದಾರೆ. 95 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 4301 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 23.07 ರಷ್ಟಿದೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 17 ರಂದು 3672 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.