Home ಸುದ್ಧಿಗಳು ಪ್ರಾದೇಶಿಕ ಉಡುಪಿ- ಇಂದಿನ ಕೊರೊನಾ ಪ್ರಕರಣ

ಉಡುಪಿ- ಇಂದಿನ ಕೊರೊನಾ ಪ್ರಕರಣ

462
0

ಉಡುಪಿ: ಉಡುಪಿ ಜಿಲ್ಲೆಯಲ್ಲಿ 1061 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-757, ಕುಂದಾಪುರ-207, ಕಾರ್ಕಳ-92, ಹೊರ ಜಿಲ್ಲೆ- 5 ಸೋಂಕಿಗೆ ಒಳಗಾಗಿದ್ದಾರೆ. 503 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 6546 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 20.49 ರಷ್ಟಿದೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಜನವರಿ 22 ರಂದು 5179 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.