ಉಡುಪಿ: ಉಡುಪಿ ಜಿಲ್ಲೆಯಲ್ಲಿ 1392 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-690, ಕುಂದಾಪುರ-363, ಕಾರ್ಕಳ-337, ಹೊರ ಜಿಲ್ಲೆ- 2 ಸೋಂಕಿಗೆ ಒಳಗಾಗಿದ್ದಾರೆ. 502 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 6660 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 21.30 ರಷ್ಟಿದೆ.
ಸೋಂಕಿನಿಂದ ಓರ್ವರು ಸಾವನ್ನಪ್ಪಿದ್ದಾರೆ. ಜನವರಿ 25 ರಂದು 5590 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.