Home ಸುದ್ಧಿಗಳು ಪ್ರಾದೇಶಿಕ ಉಡುಪಿ: ಇಂದಿನ ಕೊರೊನಾ ಪ್ರಕರಣ

ಉಡುಪಿ: ಇಂದಿನ ಕೊರೊನಾ ಪ್ರಕರಣ

493
0

ಉಡುಪಿ: ಉಡುಪಿ ಜಿಲ್ಲೆಯಲ್ಲಿ 92 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-74, ಕುಂದಾಪುರ-5, ಕಾರ್ಕಳ-13 ಸೋಂಕಿಗೆ ಒಳಗಾಗಿದ್ದಾರೆ. 17 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76594 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 427 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 479 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜನವರಿ 5 ರಂದು 4230 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1400901 ಮಾದರಿಗಳನ್ನು ಪರೀಕ್ಷಿಸಲಾಗಿದೆ.

ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.