ಉಡುಪಿ: ಉಡುಪಿ ಜಿಲ್ಲೆಯಲ್ಲಿ 148 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-125, ಕುಂದಾಪುರ-9, ಕಾರ್ಕಳ-14 ಸೋಂಕಿಗೆ ಒಳಗಾಗಿದ್ದಾರೆ. 17 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76611 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 558 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 479 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಜನವರಿ 6 ರಂದು 6005 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1406906 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.