ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರೆಲ್ಲರೂ ಉಡುಪಿ ತಾಲೂಕಿನವರಾಗಿದ್ದಾರೆ.
ಜಿಲ್ಲೆಯಲ್ಲಿ ಇಬ್ಬರು ಗುಣಮುಖರಾಗಿದ್ದು ಇಲ್ಲಿಯವರೆಗೆ 76246 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 42 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 9 ರಂದು 2331 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1235927 ಮಾದರಿಗಳನ್ನು ಪರೀಕ್ಷಿಸಲಾಗಿದೆ.