ಉಡುಪಿ: ಉಡುಪಿ ಜಿಲ್ಲೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-0, ಕುಂದಾಪುರ-2, ಕಾರ್ಕಳ-2 ಮಂದಿ ಸೋಂಕಿಗೆ ಒಳಗಾಗಿದ್ದಾರೆ.
4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76199 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 39 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ನವೆಂಬರ್ 1 ರಂದು 574 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1221992 ಮಾದರಿಗಳನ್ನು ಪರೀಕ್ಷಿಸಲಾಗಿದೆ.