ಉಡುಪಿ: ಉಡುಪಿ ಜಿಲ್ಲೆಯಲ್ಲಿ 6 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-2, ಕುಂದಾಪುರ-2, ಕಾರ್ಕಳ-2 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 12 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76222 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 33 ಸಕ್ರಿಯ ಪ್ರಕರಣಗಳಿವೆ.

ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 3 ರಂದು 1406 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1224948 ಮಾದರಿಗಳನ್ನು ಪರೀಕ್ಷಿಸಲಾಗಿದೆ.

