ಉಡುಪಿ: ಉಡುಪಿ ಜಿಲ್ಲೆಯಲ್ಲಿ 15 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-14, ಕುಂದಾಪುರದಲ್ಲಿ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 9 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76087 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 53 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 19 ರಂದು 3411 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1192412 ಮಾದರಿಗಳನ್ನು ಪರೀಕ್ಷಿಸಲಾಗಿದೆ.
