ಉಡುಪಿ: ಉಡುಪಿ ಜಿಲ್ಲೆಯಲ್ಲಿ 19 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-16, ಕುಂದಾಪುರ-2, ಕಾರ್ಕಳ-1 ಸೋಂಕಿಗೆ ಒಳಗಾಗಿದ್ದಾರೆ. 39 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75846 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 83 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 4 ರಂದು 1910 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1148224 ಮಾದರಿಗಳನ್ನು ಪರೀಕ್ಷಿಸಲಾಗಿದೆ.