ಉಡುಪಿ: ಉಡುಪಿ ಜಿಲ್ಲೆಯಲ್ಲಿ 93 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-48, ಕುಂದಾಪುರ-18, ಕಾರ್ಕಳ-27 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 202 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73578 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1516 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 460 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 16 ರಂದು 6220 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1076789 ಮಾದರಿಗಳನ್ನು ಪರೀಕ್ಷಿಸಲಾಗಿದೆ.