ಉಡುಪಿ: ಉಡುಪಿ ಜಿಲ್ಲೆಯಲ್ಲಿ 86 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-61, ಕುಂದಾಪುರ-19, ಕಾರ್ಕಳ-5, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 201 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 73779 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1399 ಸಕ್ರಿಯ ಪ್ರಕರಣಗಳಿವೆ.
ಇಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 462 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 17 ರಂದು 6316 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1083105 ಮಾದರಿಗಳನ್ನು ಪರೀಕ್ಷಿಸಲಾಗಿದೆ.