ಉಡುಪಿ: ಉಡುಪಿ ಜಿಲ್ಲೆಯಲ್ಲಿ 63 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-32, ಕುಂದಾಪುರ-13, ಕಾರ್ಕಳ-17, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 355 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 74366 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 953 ಸಕ್ರಿಯ ಪ್ರಕರಣಗಳಿವೆ.
ನಾಲ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 468 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 19 ರಂದು 4976 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1096088 ಮಾದರಿಗಳನ್ನು ಪರೀಕ್ಷಿಸಲಾಗಿದೆ.