ಉಡುಪಿ: ಉಡುಪಿ ಜಿಲ್ಲೆಯಲ್ಲಿ 69 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-43, ಕುಂದಾಪುರ-8, ಕಾರ್ಕಳ-17, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 147 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75055 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 450 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 471 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 22 ರಂದು 5206 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1111330 ಮಾದರಿಗಳನ್ನು ಪರೀಕ್ಷಿಸಲಾಗಿದೆ.