ಉಡುಪಿ: ಉಡುಪಿ ಜಿಲ್ಲೆಯಲ್ಲಿ 24 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-14, ಕುಂದಾಪುರ-6, ಕಾರ್ಕಳ-4 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 87 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 75394 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 309 ಸಕ್ರಿಯ ಪ್ರಕರಣಗಳಿವೆ.
ಓರ್ವ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 474 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 26 ರಂದು 3325 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1124712 ಮಾದರಿಗಳನ್ನು ಪರೀಕ್ಷಿಸಲಾಗಿದೆ.