ಉಡುಪಿ: ಉಡುಪಿ ಜಿಲ್ಲೆಯಲ್ಲಿ 130 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-71, ಕುಂದಾಪುರ-24, ಕಾರ್ಕಳ-33, ಹೊರ ಜಿಲ್ಲೆಯ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ. 70 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 72583 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1432 ಸಕ್ರಿಯ ಪ್ರಕರಣಗಳಿವೆ.
ಜಿಲ್ಲೆಯಲ್ಲಿ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 457 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಸೆಪ್ಟೆಂಬರ್ 4 ರಂದು 7018 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1007979 ಮಾದರಿಗಳನ್ನು ಪರೀಕ್ಷಿಸಲಾಗಿದೆ.
ಸೆಪ್ಟೆಂಬರ್ 4 ರಂದು ರಾಜ್ಯದಲ್ಲಿ ಅತಿ ಹೆಚ್ಚು ದೈನಂದಿನ ಪಾಸಿಟಿವ್ ಪ್ರಕರಣ ಇರುವ ಮೂರು ಜಿಲ್ಲೆಗಳು:
ಬೆಂಗಳೂರು ನಗರ- 358
ದಕ್ಷಿಣ ಕನ್ನಡ- 183
ಉಡುಪಿ- 130