ಉಡುಪಿ: ಉಡುಪಿ ಜಿಲ್ಲೆಯಲ್ಲಿ 91 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-54, ಕುಂದಾಪುರ-8, ಕಾರ್ಕಳ-29 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 137 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69365 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1242 ಸಕ್ರಿಯ ಪ್ರಕರಣಗಳಿವೆ.
ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 429 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 9 ರಂದು 3870 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 823338 ಮಂದಿಯನ್ನು ಪರೀಕ್ಷಿಸಲಾಗಿದೆ.