ಉಡುಪಿ: ಉಡುಪಿ ಜಿಲ್ಲೆಯಲ್ಲಿ 130 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-63, ಕುಂದಾಪುರ-36, ಕಾರ್ಕಳ-30, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 166 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69531 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1205 ಸಕ್ರಿಯ ಪ್ರಕರಣಗಳಿವೆ.
ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 430 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 10 ರಂದು 6557 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 829895 ಮಂದಿಯನ್ನು ಪರೀಕ್ಷಿಸಲಾಗಿದೆ.




By
ForthFocus™