ಉಡುಪಿ: ಉಡುಪಿ ಜಿಲ್ಲೆಯಲ್ಲಿ 191 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-96, ಕುಂದಾಪುರ-49, ಕಾರ್ಕಳ-45, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 136 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69667 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1259 ಸಕ್ರಿಯ ಪ್ರಕರಣಗಳಿವೆ.
ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 431 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 11 ರಂದು 5756 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 835651 ಮಂದಿಯನ್ನು ಪರೀಕ್ಷಿಸಲಾಗಿದೆ.
ದಿನಾಂಕ 13/08/2021 ರಂದು ಉಡುಪಿ ಜಿಲ್ಲೆಯಲ್ಲಿ ಯಾವುದೇ ಕೋವಿಡ್-19 ಲಸಿಕಾ ಶಿಬಿರ ಇರುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.