ಉಡುಪಿ: ಉಡುಪಿ ಜಿಲ್ಲೆಯಲ್ಲಿ 169 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-98, ಕುಂದಾಪುರ-25, ಕಾರ್ಕಳ-43, ಹೊರ ಜಿಲ್ಲೆಯ ಮೂವರು ಸೋಂಕಿಗೆ ಒಳಗಾಗಿದ್ದಾರೆ. 146 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 69912 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1296 ಸಕ್ರಿಯ ಪ್ರಕರಣಗಳಿವೆ.
ಓರ್ವರು ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 433 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 13 ರಂದು 5848 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 848408 ಮಂದಿಯನ್ನು ಪರೀಕ್ಷಿಸಲಾಗಿದೆ.




By
ForthFocus™