ಉಡುಪಿ: ಉಡುಪಿ ಜಿಲ್ಲೆಯಲ್ಲಿ 177 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-97, ಕುಂದಾಪುರ-37, ಕಾರ್ಕಳ-42, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 117 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70029 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1356 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಜಿಲ್ಲೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 433 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 14 ರಂದು 4340 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 852748 ಮಂದಿಯನ್ನು ಪರೀಕ್ಷಿಸಲಾಗಿದೆ.