ಉಡುಪಿ: ಉಡುಪಿ ಜಿಲ್ಲೆಯಲ್ಲಿ 107 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-39, ಕುಂದಾಪುರ-38, ಕಾರ್ಕಳ-29, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 133 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 70162 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 1330 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 433 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಆಗಸ್ಟ್ 15 ರಂದು 3077 ಮಂದಿಯನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 855825 ಮಂದಿಯನ್ನು ಪರೀಕ್ಷಿಸಲಾಗಿದೆ.